Tag: #balarama #vinodprabhakar #sandalwood #cinibuzz
-
ಟೈಗರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ .
ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು…