`ಚಿತ್ತಾರ’ ಮಾಸ ಪತ್ರಿಕೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಅವಿನಾಭಾವ ಸಂಬಂಧ ಒಂದೂವರೆ ದಶಕದಿಂದಲೂ ಇದೆ. `ಚಿತ್ತಾರ’ದ ಇತಿಹಾಸದ ಪುಟಗಳನ್ನು ತಿರುವಿದರೆ ಇದಕ್ಕೆ ಸಾಕಷ್ಟು ಸಾಕ್ಷಿಗಳು ಸಿಕ್ಕಿ ಬಿಡುತ್ತವೆ. ಕನ್ನಡ ಚಿತ್ರೋದ್ಯಮದ ನಾಡಿಮಿಡಿತವನ್ನು ಗಮನಿಸುತ್ತಾ, ಅಲ್ಲಿನ ಬೆಳವಣಿಗೆಗಳನ್ನು ಓದುಗರಿಗೆ ದಾಟಿಸುತ್ತಾ, ತಪ್ಪುಗಳಾದಾಗ ಎಚ್ಚರಿಸುತ್ತಾ, ಸಿನಿಮಾವನ್ನು ಮನೋರಂಜನಾ ಕ್ಷೇತ್ರವಾಗಿಯೂ, ಉದ್ಯಮವಾಗಿಯೂ ನೋಡುವ ಗಾಂಭೀರ್ಯತೆಯನ್ನು `ಚಿತ್ತಾರ’ ಉಳಿಸಿಕೊಂಡಿದೆ. ಹೀಗಾಗಿಯೇ ಚಂದನವನವನ್ನು ಉತ್ತೇಜಿಸುವ ಮತ್ತು ಬೆಸೆಯುವ ಅದ್ಭುತ ವೇದಿಕೆಯೊಂದನ್ನು `ಚಿತ್ತಾರ ಸ್ಟಾರ್ ಅವಾರ್ಡ್ಸ್’ ಮೂಲಕ ಸೃಷ್ಟಿಸಿತು. ಮೊದಲ ಕಾರ್ಯಕ್ರಮದಲ್ಲೇ ವರ್ಣರಂಜಿತ, ಅದ್ದೂರಿ, […]
`ಚಿತ್ತಾರ’ ಮಾಸ ಪತ್ರಿಕೆ ಚಂದನವನವನ್ನು ಉತ್ತೇಜಿಸುವ ಮತ್ತು ಬೆಸೆಯುವ ಸಲುವಾಗಿ, ಈ ಹಿಂದೆ ಚಿತ್ತಾರ ಶಾರ್ಟ್ ಫಿಲ್ಮ್ ಅವಾರ್ಡ್ಸ್, ಅಭಿಮಾನಿಯೊಂದಿಗೆ ತಾರೆ, ಎ ಡೇ ವಿತ್ ಸ್ಟಾರ್… ಹೀಗೆ ಸಾಕಷ್ಟು ಯಶಸ್ವಿ ಕಾರ್ಯಕ್ರಮಗಳನ್ನು ನೀಡುತ್ತಲೇ ಬಂದಿದೆ. ಅದೇ ರೀತಿ ಚಂದನವನದ ತಾರೆಯರು ಮತ್ತು ತೆರೆ ಹಿಂದೆ ಕೆಲಸ ಮಾಡುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಅದ್ಭುತ ವೇದಿಕೆಯೊಂದನ್ನು 2019ರಲ್ಲಿ `ಚಿತ್ತಾರ ಸ್ಟಾರ್ ಅವಾರ್ಡ್ಸ್’ ಎಂಬ ವಿಭಿನ್ನ ವರ್ಣರಂಜಿತ ಅದ್ದೂರಿ, ಅರ್ಥಗರ್ಭಿತ ಕಾರ್ಯಕ್ರಮ ನೀಡಿ ಇತಿಹಾಸ ಸೃಷ್ಟಿಸಿತ್ತು. ಚಂದನವನದ ಪ್ರತಿಭೆಗಳನ್ನು […]