ಕೋಟಿ ಸಿನಿಮಾದ ‘ಮಾತು ಸೋತು’ ಹಾಡು ರೀಲ್ಸ್ಗಳಲ್ಲಿ ಟ್ರೆಂಡಿಂಗ್ ಆಗ್ತಾ ಇದೆ. ಈಗಾಗಲೇ ಸಾವಿರಾರು ರೀಲ್ಸ್ ಆಗಿದ್ದು, ಈ ರೀಲ್ಸ್ಗಳು ಮಿಲಿಯನ್ಗಟ್ಟಲೆ ವೀಕ್ಷಣೆ ಪಡೆದಿವೆ. ಇನ್ಸ್ಟಾಗ್ರಾಮ್ನಲ್ಲಿ ಕಳೆದ ಒಂದು ವಾರದಿಂದ ‘ಟ್ರೆಂಡಿಂಗ್’ನಲ್ಲಿರುವ ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿ, ಯೋಗರಾಜ್ ಭಟ್ ಬರೆದು, ಅರ್ಮಾನ್ ಮಲಿಕ್ ಹಾಡಿದ್ದಾರೆ. ಈಗಾಗಲೇ ಈ ಹಾಡಿನ ಲಿರಿಕಲ್ ವಿಡಿಯೋ ಯೂಟ್ಯೂಬಿನಲ್ಲಿ ಹದಿನಾಲ್ಕು ಲಕ್ಷದಷ್ಟು ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಯೂಟ್ಯೂಬ್ ಶಾರ್ಟ್ಸಲ್ಲೂ ಟ್ರೆಂಡಿಂಗ್ ಆಗ್ತಾ ಇದೆ. ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್ “ಮಾತು […]
ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಮೇ 13, ಸೋಮವಾರ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಮೇ 13ರಂದು ಬಿಡುಗಡೆಯಾಗಲಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಇದ್ದಾರೆ. […]