ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ನಿರ್ಮಾಣದ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ ” .
ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 5 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಹಾಗೂ ಹಾಡುಗಳನ್ನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರೇಕ್ಷಕರು ಚಿತ್ರಮಂದಿರಗಳಿಗೂ […]