ವಿಕ್ಕಿ ವರುಣ್ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು ಸರಿಸುಮಾರು ಹದಿನೈದು ವರ್ಷಗಳೇ ಕಳೆದಿವೆ. ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಮೂಲಕ ಹೀರೋ ಆಗಿ ಲಾಂಚ್ ಆದವರು. ಇದೇ ಸೆಪ್ಟೆಂಬರ್ ತಿಂಗಳಿಗೆ ಕೆಂಡಸಂಪಿಗೆ ತೆರೆಗೆ ಬಂದು ಒಂಭತ್ತು ವರ್ಷಗಳಾಗಿವೆ. ಈ ನಡುವೆ ಕಾಲೇಜ್ ಕುಮಾರ್ ಸಿನಿಮಾವನ್ನು ಹೊರತುಪಡಿಸಿ ವಿಕ್ಕಿ ನಟನೆಯ ಬೇರೆ ಯಾವ ಚಿತ್ರಗಳೂ ತೆರೆಗೆ ಬಂದಿಲ್ಲ. ಹಾಗೆ ನೋಡಿದರೆ, ವಿಕ್ಕಿ ತುಂಬಾನೇ ಲಕ್ಕಿ. ಮೊದಲ ಚಿತ್ರಕ್ಕೆ ಸ್ಟಾರ್ ಡೈರೆಕ್ಟರ್ ಸೂರಿ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ನಂತರದ […]
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ “ಬಾಂಡ್ಲಿ ಸೌಟ್” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಮೊದಲು ಒಂದು ಹಾಡು ಶುರುವಾಗಬೇಕದಾಗಿನಿಂದಲೂ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು […]
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್.ವಾಸು ‘ಕಾಲಾಪತ್ಥರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು […]