ಪವಿತ್ರಾ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-೨ ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು, ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ‘ನಮ್ಮ ಸಹೋದರ ಕುಮಾರ್ […]
ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮಾಡಲಾಯಿತು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ […]