ಶಭ್ಬಾಷ್: ಶಿಷ್ಯನ ಮೊದಲ ಹೆಜ್ಜೆಗೆ ಕ್ಲಾಪ್ ಮಾಡಿ ಚಾಲನೆ ನೀಡಿದರು ಓಂ ಸಾಯಿಪ್ರಕಾಶ್!
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ […]