ಎಸ್.ಎಲ್.ಎನ್. ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೆ.ಎನ್. ನಾಗೇಶ್ ಕೋಗಿಲು ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾ ಟಕ್ಕರ್. ಇದು ಅವರ ಬ್ಯಾನರ್ ನ ಎರಡನೇ ಚಿತ್ರವಾಗಿದ್ದು, ಹುಲಿರಾಯ ಎಂಬ ಸಿನಿಮಾವನ್ನು ಈ ಮೊದಲು ನಿರ್ಮಾಣ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸೋದರಳಿಯ ಮನೋಜ್ ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುಟ್ಟಗೌರಿ ಮದುವೆ ಖ್ಯಾತಿಯ  ರಂಜಿನಿ ರಾಘವನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಚಿತ್ರೀಕರಣವನ್ನು ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿರುವ ಟಕ್ಕರ್ ಸದ್ಯದಲ್ಲಿಯೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಟಕ್ಕರ್ ಹಾಡುಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದ್ದು, ಸೆಪ್ಟೆಂಬರ್ 7ರಂದು ಮನೋಜ್ ಸೋದರ ಮಾವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಆಡಿಯೋ ಬಿಡುಗಡೆ ಮಾಡಲಿದ್ದಾರೆ.

ಟಕ್ಕರ್ ನಲ್ಲಿ ಮೂರು ಹಾಡುಗಳಿದ್ದು, ಡಾ|| ವಿ. ನಾಗೇಂದ್ರ ಪ್ರಸಾದ್ ಎರಡು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಡ್ಯುಯೆಟ್ ಹಾಡನ್ನು ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್ ಹಾಡಿದರೆ, ಹೀರೋ ಇಂಟ್ರಡಕ್ಷನ್ ಹಾಡನ್ನು ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಸ್ಫೂರ್ತಿದಾಯಕ ಗೀತೆಯೊಂದನ್ನು ಯುವ ಹಾಡುಗಾರ ಸಂಜಿತ್ ಹೆಗ್ಡೆ ಹಾಡಿದ್ದಾರೆ. ವಿಜಯ್ ಪ್ರಕಾಶ್ ಹಾಡಿರುವ ಹಾಡನ್ನು ಮಲೇಶಿಯಾದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷವೆಂದರೆ ಈ ಚಿತ್ರದ ಆರಂಭದಲ್ಲಿ ಬರುವ ನಾಯಕನ ಇಂಟ್ರಡಕ್ಷನ್ ಹಾಡಿನಲ್ಲೇ ಫೈಟ್ ಸೀಕ್ವೆನ್ಸ್ ಗಳನ್ನು ಅಳವಡಿಸಲಾಗಿದೆ. `ಆನೆ ನಡೆದಿದ್ದೆ ದಾರಿ ಅಲ್ವೇನ್ರಿ ಯಾರು ಕೊಡಬೇಡಿ ಟಕ್ಕರ್’ಎನ್ನುವ ಸಾಲಿನಿಂದ ಆರಂಭವಾಗುವ ಹಾಡಿನಲ್ಲಿ ಮೋಹನ್ ಅವರ ಕೊರಿಯೋಗ್ರಫಿ ಮತ್ತು ಡಿಫರೆಂಟ್ ಡ್ಯಾನಿ ಅವರ ಸಾಹಸ ಸಮ್ಮಿಲನಗೊಂಡಿದೆ.

ಟಕ್ಕರ್ ಚಿತ್ರವನ್ನು ವಿ. ರಘುಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಕದ್ರಿ ಮಣಿಕಾಂತ್ ಸಂಗೀತ, ಡಾ|| ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಡಿಫರೆಂಟ್ ಡ್ಯಾನಿ ಸಾಹಸ ಸಂಯೋಜನೆ, ವಿಲಿಯಮ್ಸ್ ಡೇವಿಡ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಗುರುರಾಜ್ ದೇಸಾಯಿ ಸಂಭಾಷಣೆ ಈ ಚಿತ್ರಕ್ಕಿದೆ. ಟಕ್ಕರ್ ತಾರಾಗಣದಲ್ಲಿ ಮನೋಜ್ ಕುಮಾರ್ ಮತ್ತು ರಂಜನಿರಾಘವನ್, ಕೆ.ಎಸ್. ಶ್ರೀಧರ್, ಶಂಕರ್ ಅಶ್ವಥ್, ಸುಮಿತ್ರಾ, ಭಜರಂಗಿ ಖ್ಯಾತಿಯ ಸೌರವ್ ಲೋಕಿ, ಸಾಧು ಕೋಕಿಲಾ, ಲಕ್ಷ್ಮಣ್ ಶಿವಶಂಕರ್, ಅಶ್ವಿನ್ ಹಾಸನ್, ಕುರಿ ಸುನಿಲ್, ಜೈಜಗದೀಶ್ ಮುಂತಾದವರು ನಟಿಸಿದ್ದಾರೆ.

CG ARUN

ರಾಕಿಂಗ್ ದಂಪತಿಗೆ ಕ್ಲಾಸ್ ತೆಗೆದುಕೊಂಡ ಕಮೆಂಟಿಗರು!

Previous article

ಕಾಮಿಡಿ ಕಿಲಾಡಿಗಳು ಸೀಜನ್ 3ಕ್ಕೆ ವೇದಿಕೆ ಸಜ್ಜು!

Next article

You may also like

Comments

Leave a reply

Your email address will not be published. Required fields are marked *