ಓಂ ಬಾಲಾಜಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್.ನರಸಿಂಹಲು ಅವರು ನಿರ್ಮಿಸಿರುವ ‘ತಾರಾಕಾಸುರ‘ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ರೆಬಲ್ಸ್ಟಾರ್ ಅಂಬರೀಶ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸುಮಲತ ಅಂಬರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ದೊಡ್ದಣ್ಣ ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ನಾಯಕನನ್ನು ಪರಿಚಯಿಸುವ ಈ ಹಾಡನ್ನು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಡಿದ್ದಾರೆ. ಧರ್ಮವಿಶ್ ಸಂಗೀತ ನೀಡಿದ್ದಾರೆ.
ಹಿಂದೆ ‘ರಥಾವರ‘ ಎಂಬ ಯಶಸ್ವಿ ಚಿತ್ರ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ‘ತಾರಾಕಾಸುರ‘ ಚಿತ್ರದ ನಿರ್ದೇಶಕರು. ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಧರ್ಮವಿಶ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಕುಮಾರ್ ಗೌಡ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಜಾಲಿ ಬಾಸ್ಟಿನ್, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ವೈಭವ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಾನ್ವಿತ ಹರೀಶ್. ಹಾಲಿವುಡ್ನ ನಟ ಡ್ಯಾನಿ ಸಫ಼ಾನಿ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಜೈಜಗದೀಶ್, ಎಂ.ಕೆ.ಮಠ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
#
No Comment! Be the first one.