ಪೊಂಗಲ್ ಗೆ ರಿಲೀಸ್ ಆಗಿ ಬ್ಲಾಕ್ ಬಸ್ಟರ್ ಹಿಟ್ ಕಂಡ ಪೆಟ್ಟಾ ಚಿತ್ರದಲ್ಲಿ ಸಣ್ಣ ಪಾತ್ರವೊಂದರಲ್ಲಿ ಅಭಿನಯಿಸಿದ್ದ ತ್ರಿಶಾ ಅವರ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಆ ಚಿತ್ರದ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಂಡ ತ್ರಿಶಾ ಸದ್ಯ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ರಾಂಗಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಆಕ್ಷನ್‌ ದೃಶ್ಯಗಳ ಚಿತ್ರೀಕರಣವು ಸೆಪ್ಟೆಂಬರ್‌ ತಿಂಗಳಲ್ಲಿ ಉಜ್ಬೇಕಿಸ್ತಾನದಲ್ಲಿ ನಡೆಯಲಿದೆ.

ಈ ಚಿತ್ರವನ್ನು ಎಂ. ಶರವಣನ್‌ ನಿರ್ದೇಶಿಸುತ್ತಿದ್ದು, ತ್ರಿಶಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರದ ಪೋಸ್ಟರ್‌ವೊಂದನ್ನು ಚಿತ್ರತಂಡ ಹಂಚಿಕೊಂಡಿದ್ದು, ಅದರಲ್ಲಿ ತ್ರಿಶಾ ಕೈಯಲ್ಲಿ ಗನ್‌ ಹಿಡಿದುಕೊಂಡಿದ್ದು, ಚಿತ್ರದ ಕತೆ ಬಗ್ಗೆ ಕುತೂಹಲ ಕೆರಳಿಸಿದೆ. ಸೆಪ್ಟೆಂಬರ್‌ ಅಂತ್ಯದಲ್ಲಿ ಈ ಚಿತ್ರದ ಟೀಸರ್‌ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಚಿತ್ರವನ್ನು ಲೈಕಾ ಪ್ರೊಡಕ್ಷನ್‌ ನಿರ್ಮಾಣ ಮಾಡುತ್ತಿದೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಸಾಹೋ ಪೋಸ್ಟರ್ ಕಾಪಿ ಮಾಡಿದ್ಯಂತೆ!

Previous article

ರಾಕಿ ಬಾಯ್ ರಿಲೀಸ್ ಮಾಡಲಿದ್ದಾರೆ ಕಿಸ್ ಟ್ರೇಲರ್!

Next article

You may also like

Comments

Leave a reply

Your email address will not be published. Required fields are marked *