ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಉತ್ತರಾಕಾಂಡದಲ್ಲಿ ನಟಿಸಲಿದ್ದಾರೆ. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ.
“ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
No Comment! Be the first one.