G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ “ದ ಜಡ್ಜ್ ಮೆಂಟ್” ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ.
ಇತ್ತೀಚಿಗೆ ಡಾ|ರಾಜಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತದೆ. ಮತ್ತೊಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪ್ರತಿಷ್ಠಿತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಈ ಹೆಸರಾಂತ ಸಂಸ್ಥೆಯ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ವಿತರಣೆ ಅಷ್ಟೇ ಅಲ್ಲದೆ, ಮುಂದೆ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುವ ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ತಿಳಿಸಿದೆ. ಈವರೆಗೂ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ವಿತರಣೆ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ವಿತರಣೆ ಮಾಡಿದೆ. ಆ ಪೈಕಿ ಹತ್ತೊಂಬತ್ತು ಚಿತ್ರಗಳು ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ ಚಿತ್ರಗಳಾಗಿದೆ. ಇಂತಹ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರುವುದಾಗಿ ನಿರ್ಮಾಪಕ ಹಾಗೂ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ತಿಳಿಸಿದ್ದಾರೆ.
ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್ ಅವರ ಸಂಕಲನ ಈ ಚಿತ್ರಕ್ಕಿದೆ.
ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Leave a Reply
You must be logged in to post a comment.