ಸಿನಿಮಾ ರಂಗದಲ್ಲಿ ಕಾಸ್ಟಿಂಗ್ ಕೌಚ್ ಎಂಬುದು ಶರ್ಟ್ ಬದಲಿಸುವಷ್ಟರ ಮಟ್ಟಿಗೆ ಸಾಮಾನ್ಯವಾಗಿಬಿಟ್ಟಿದೆ. ಅನಿವಾರ್ಯ ಪರಿಸ್ಥಿತಿಗೆ ಮನಸೋತ ಸಾಕಷ್ಟು ಮುಗ್ಧ ಮನಸ್ಸುಗಳು ಖೆಡ್ಡಾ ಎಂಬ ಅರಿವಿದ್ದರೂ ಬಿದ್ದು ಏಳುವ ಸಿಚುವೇಷನ್ನುಗಳಿಗೆ ಗುರಿಯಾಗಿರುತ್ತಾರೆ. ಇನ್ನೂ ಕೆಲವರಂತೂ ಇಂತಹ ಕುಕೃತ್ಯವನ್ನು ಎಡಗಾಲಲ್ಲಿ ಒದ್ದು ನಡೆದ ಪ್ರಸಂಗಗಳೂ ಇವೆ. ಪ್ರತಿಯೊಬ್ಬ ನಟಿಮಣಿಯರೂ ಒಂದಿಲ್ಲೊಂದು ಸಂದರ್ಭಗಳಲ್ಲಿ ಇಂತಹ ಸನ್ನಿವೇಶಗಳಲ್ಲಿ ನಲುಗಿದವರೇ ಆಗಿರುತ್ತಾರೆ.
ಇತ್ತೀಚಿಗೆ ಬಾಲಿವುಡ್ ನಟಿ ವಿದ್ಯಾಬಾಲನ್ ಅವರನ್ನು ನಿರ್ದೇಶಕರೊಬ್ಬರು ಹೋಟೆಲಿನ ರೂಮಿಗೆ ಬರಲು ತಿಳಿಸಿದ್ದ ವಿಷಯವನ್ನು ಸ್ವತಃ ವಿದ್ಯಾಬಾಲನ್ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ. ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿರುವ ವಿದ್ಯಾಬಾಲನ್ “ನನಗೆ ನೆನಪಿದೆ. ನಾನು ಚೆನೈನಲ್ಲಿ ಕೆಲಸದ ವಿಷಯಕ್ಕಾಗಿ ಒಬ್ಬ ನಿರ್ದೇಶಕರನ್ನು ಭೇಟಿ ಮಾಡಿದ್ದೆ. ಆಗ ನಾನು ಅವರಿಗೆ ಕಾಫಿ ಶಾಪ್ ಹೋಗಿ ಮಾತನಾಡೋಣ ಎಂದು ಹೇಳಿದ್ದೆ. ಆದರೆ ಅವರು ಪದೇ ಪದೇ ರೂಮಿಗೆ ಹೋಗುವುದರ ಬಗ್ಗೆ ಮಾತನಾಡುತ್ತಿದ್ದರು. ಅಲ್ಲದೆ ನನ್ನ ಜೊತೆ ಮಾತನಾಡಬೇಕು ಎಂದರೆ ರೂಮಿಗೆ ಬರಬೇಕು ಎಂದು ಹೇಳುತ್ತಿದ್ದರು ಎಂದಿದ್ದಾರೆ. ಆದರೆ ಆ ನಿರ್ದೇಶಕರು ಯಾರು ಎಂಬುದನ್ನು ಮಾತ್ರ ವಿದ್ಯಾ ಬಾಲನ್ ರಹಸ್ಯವಾಗಿಯೇ ಉಳಿಸಿಕೊಂಡಿದ್ದಾರೆ.
No Comment! Be the first one.