ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಂ ರವಿಚಂದ್ರನ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ಸದ್ಯದಲ್ಲೇ ಆರಂಭವಾಗಲಿದೆ. ರಾ ಹಾಗೂ ರಗಡ್ ಪಾತ್ರದಲ್ಲಿ ವಿಕ್ರಂ ಅಭಿನಯಿಸುತ್ತಿದ್ದಾರೆ. ಮಾಸ್ಕ ಥಾಹಂದರದೊಂದಿಗೆ, ಸೆಂಟಿಮೆಂಟ್ ಸನ್ನಿವೇಶಗಳು ಚಿತ್ರದಲ್ಲಿದ್ದು, ತಾಯಿ ಹಾಗೂ ಮಗನ ನಡುವಿನ ಭಾಂದವ್ಯದ ದೃಶ್ಯಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆಯಂತೆ. ಮನು ನಾಗ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಕನ್ನಡ ಹಾಗೂ ಮಲೆಯಾಳಂನ ಪ್ರಸಿದ್ದ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಮನು ನಾಗ್, ಬಹುಭಾಷ ನಟಿ ಪ್ರಿಯಾಮಣಿ ಅವರ ಅಭಿನಯದಲ್ಲಿ ವೈಟ್ ಎಂಬ ಕಿರುಚಿತ್ರ ನಿರ್ದೇಶಿಸಿದ್ದರು. ಚಿತ್ರರಂಗದ ಇತಿಹಾಸಾದಲ್ಲೇ ಮೊದಲ ಬಾರಿಗೆ ಕಿರುಚಿತ್ರವೊಂದಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್ ಧ್ವನಿ ನೀಡಿದ್ದರು. ಮನು ನಾಗ್ ಅವರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದ ಫ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಬಂಡವಾಳ ಹೂಡುತ್ತಿದ್ದಾರೆ. ನಾಯಕನ ಹೊರತು ಪಡಿಸಿ ಉಳಿದ ತಾರಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಮಾಹಿತಿ ನೀಡಲಾಗುವುದು.
No Comment! Be the first one.