ರಾಜಕುಮಾರ ಬ್ಲಾಕ್ ಬಸ್ಟರ್ ಸಕ್ಸಸ್ ನಂತರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ನಿನ ಎರಡನೇ ಸಿನಿಮಾ ಯುವರತ್ನ. ಈಗಾಗಲೇ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಬೆಂಗಳೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಬಹುತೇಕ ಕಡೆ ಯುವರತ್ನ ಶೂಟಿಂಗ್ ನಡೆಸಲಾಗಿದೆ. ಸದ್ಯ ಚಿತ್ರತಂಡ ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಅಲ್ಲಿನ ಮಹಾರಾಣಿ ಕಾಲೇಜಿನಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ.
ಈ ಹಿಂದೆ ಮಿಸ್ಟರ್ ಅಂಡ್ ಮಿಸೆಸ್ ರಾಮಚಾರಿ ಚಿತ್ರದ ಬಹುತೇಕ ಸೀನ್ ಗಳನ್ನು ಇದೇ ಕಾಲೇಜಿನಲ್ಲಿ ಸೆರೆ ಹಿಡಿದಿದ್ದು, ಸದ್ಯ ಯುವರತ್ನಕ್ಕಾಗಿಯೂ ಇದೇ ಕಾಲೇಜನ್ನು ಸೆಲೆಕ್ಟ್ ಮಾಡಿಕೊಳ್ಳಲಾಗಿದೆ. ಸದ್ಯ ಯುವರತ್ನ ಶೂಟಿಂಗ್ ನ ಫೋಟೋವೊಂದು ರಿವೀಲ್ ಆಗಿದ್ದು, ಪುನೀತ್ ಕಾಲೇಜ್ ಸ್ಟೂಡೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಹಳ ವರ್ಷಗಳ ಬಳಿಕ ಪುನೀತ್ ಕಾಲೇಜ್ ವಿದ್ಯಾರ್ಥಿಯಾಗಿ ನಟಿಸುತ್ತಿರುವುದಿಂದ ಯುವರತ್ನದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಇನ್ನು ಚಿತ್ರದಲ್ಲಿ ಪುನೀತ್, ಧನಂಜಯ್, ವಸಿಷ್ಠ ಸಿಂಹ, ಅರು ಗೌಡ, ರಾಧಿಕಾ ಶರತ್ ಕುಮಾರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
No Comment! Be the first one.